ಡೈಲಿ ವಾರ್ತೆ: 01/ ಆಗಸ್ಟ್/2024

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೋಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೋರ್ವ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ.

ಲಿಕೇಶ್ ಹಾಗೂ ಫೈಜಲ್ ಬಂಧಿತ ಆರೋಪಿಗಳಾಗಿದ್ದು, ಅಫೀಕ್ ಎಂಬಾತ ತಲೆಮರೆಸಿಕೊಂಡಿದ್ದಾನೆ

  ಅಪ್ರಾಪ್ತ ಬಾಲಕಿಯನ್ನು ಬಂಟ್ವಾಳದ ಪಾರ್ಕ್ ಒಂದಕ್ಕೆ ಬರುವಂತೆ ಪುಸಲಾಯಿಸಿ, ಬರಮಾಡಿಕೊಂಡ ಮೂವರು ಯುವಕರು ಅ ಬಳಿಕ ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಲೆ ಮರೆಸಿಕೊಂಡ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.