ಡೈಲಿ ವಾರ್ತೆ: 01/ ಆಗಸ್ಟ್/2024

ಪಲ್ಗುಣಿ ನದಿಯಲ್ಲಿ ಉಕ್ಕಿ ಹರಿದ ನೀರು: ಹಲವು ಮನೆಗಳು ಜಲಾವೃತ!

ಬಂಟ್ವಾಳ : ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಕಡಪು ಕರಿಯ ಬಳಿ ಪಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಸುಮಾರು 8 ಮನೆಗಳಿಗೆ ನೀರು ನುಗ್ಗಿದ್ದು ಎಲ್ಲಾ ಕುಟುಂಬಗಳನ್ನು ಬಂಟ್ವಾಳ ತಾಲೂಕು ಆಡಳಿತ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ರಕ್ಷಿಸಲಾಗಿದೆ.

ಪಲ್ಗುಣಿ ನದಿಯಲ್ಲಿ ನೀರು ಏರಿಕೆಯಾದ ಬಳಿಕ ಕೃತಕ ನೆರೆಯ ರೂಪದಲ್ಲಿ ಈ 8 ಮನೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ, ಅಗ್ನಿಶಾಮಕ ದಳದ ಬೋಟ್ ಮೂಲಕ ಅವರನ್ನು ‌ರಕ್ಷಣೆ ಮಾಡಲಾಗಿದ್ದು
ನದಿಯಲ್ಲಿ ಕಸದ ರಾಶಿಯಿಂದ ರಕ್ಷಣಾ ಕಾರ್ಯಕ್ಕೆ ಕೊಂಚ ಮಟ್ಟಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಿಸಲ್ಪಟ್ಟ ಕುಟುಂಬದ ಮನೆಮಂದಿಗೆ ಪೊಳಲಿ ಸರ್ವಮಂಗಲ ಸಭಾಭವನದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.

ಕರಿಯಂಗಳ ಗ್ರಾ‌.ಪಂ.ಅಧ್ಯಕ್ಷೆ ರಾಧ, ಉಪಾಧ್ಯಕ್ಷ ರಾಧಕೃಷ್ಣ ತಂತ್ರಿ, ಸದಸ್ಯರಾದ ಕಾರ್ತಿಕ್ ಬಲ್ಲಾಳ್, ಚಂದ್ರಹಾಸ ಪಲ್ಲಿಪಾಡಿ, ಭಾಗೀರಥಿ, ರವೀಂದ್ರ ಸುವರ್ಣ, ಲಕ್ಮೀಶ್ ಶೆಟ್ಟಿ, ಲೋಕೇಶ್ ಭರಣಿ, ಕಂದಾಯ ನಿರೀಕ್ಷಕ ವಿಜಯ್ ಪಿಡಿಒಗಳಾದ ಮಾಲಿನಿ,ನಯನ,ಪ್ರಮುಖರಾದ ವೆಂಕಟೇಶ ನಾವಡ, ಯಶವಂತ ಪೊಳಲಿ ಸಹಿತ ಅನೇಕರ ತಂಡ ರಕ್ಷಣಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ.