ಡೈಲಿ ವಾರ್ತೆ: 02/ಆಗಸ್ಟ್/2024

ಉಡುಪಿಯಲ್ಲಿ ಮಾಸ್ಕ್ ಗ್ಯಾಂಗ್: ನಾಲ್ಕು ಮಂದಿ ಮುಸುಕುಧಾರಿಗಳಿಂದ ಪ್ಲಾಟ್ ಗಳಲ್ಲಿ ಕಳ್ಳತನಕ್ಕೆ ವಿಫಲ ಯತ್ನ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ನಗರದ ಬ್ರಹ್ಮಗಿರಿಯ ಭಾಗದ ಅಪಾರ್ಟ್ ಮೆಂಟ್ ನ ಪ್ಲಾಟ್ ವೊಂದಕ್ಕೆ ನಾಲ್ಕು ಮಂದಿ ಮುಸುಕುಧಾರಿಗಳು ನುಗ್ಗುಲು ಯತ್ನಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ
ಆ. 1 ರಂದು ಮುಂಜಾನೆ ನಡೆದಿದೆ.

ಮುಸುಕುಧಾರಿ ಆಗಂತುಕರು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಸೆರೆಯಾಗಿದೆ.
ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ.

ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.