ಡೈಲಿ ವಾರ್ತೆ: 02/ಆಗಸ್ಟ್/2024

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಜಾರಿ ಬಿದ್ದು ಕಾಲು ಹಾಗೂ ಸೊಂಟಕ್ಕೆ ಗಾಯ – ಒಂದು ತಿಂಗಳು ವಿಶ್ರಾಂತಿಗೆ ವೈದ್ಯರ ಸಲಹೆ

ಬಂಟ್ವಾಳ : ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಾರಿ ಬಿದ್ದು ಕಾಲು ಹಾಗೂ ಸೊಂಟಕ್ಕೆ ಗಾಯವಾಗಿರುವುದರಿಂದ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರದ ಪ್ರವಾಸವನ್ನು ರದ್ದು ಮಾಡಲಾಗಿದ್ದು, ಶಾಸಕರು ಸಾರ್ವಜನಿಕರ ಸಂಪರ್ಕಕ್ಕೆ ಸಿಗಲು ಕಷ್ಟಸಾಧ್ಯ. ಅಗತ್ಯವಿರುವ ಕೆಲಸಗಳಿಗೆ ಪೋನ್ ಮೂಲಕ ಸಂಪರ್ಕ ಮಾಡುವಂತೆ ಅಥವಾ ಶಾಸಕರ ಕಚೇರಿಯನ್ನು ಸಂಪರ್ಕ ಮಾಡಲು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.