ಡೈಲಿ ವಾರ್ತೆ: 03/ಆಗಸ್ಟ್/2024

ಮೈಸೂರ್ ಚಲೋ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೊಡ್ಗಿ ಭಾಗಿ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಮೈಸೂರ್ ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿ.
ಮಂಗಳವಾರ ಸಂಜೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಮೈಸೂರ್ ಚಲೋ ಪಾದಯಾತ್ರೆಗೆ ಹೊರಡಲಿದ್ದು ಈ ಪಾದಯಾತ್ರೆಯು ಬುಧುವಾರ ಬೆಳಿಗ್ಗೆ 9:00ಗೆ ಮುದ್ದೂರು ನಿಂದ ಮಂಡ್ಯ ತನಕ ಪಾದಯಾತ್ರೆಯು ಸಾಗಲಿದ್ದು.
ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಕುಂದಾಪುರ ಮಂಡಲದ ಸರ್ವಪದಾಧಿಕಾರಿಗಳು, ಪ್ರಮುಖರು ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವಂತೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನೆರವೇರಿತು,ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಾಡುರು ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿದರು ಸುಧೀರ್ ಕೆ.ಎಸ್ ಕಾರ್ಯಕ್ರಮವನ್ನು ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.