ಡೈಲಿ ವಾರ್ತೆ: 04/ಆಗಸ್ಟ್/2024
ಕಾಂಗ್ರೆಸ್ ಸರಕಾರದ ವಿರುದ್ಧ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ
ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಯುತ್ತಿರುವ ಪಾದಯಾತ್ರೆಯಲ್ಲಿ
ಇಂದು ಉಡುಪಿ ಚಿಕ್ಕಮಗಳೂರು ಸಂಸದರಾದ ಮಾನ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿದರು.
ಇದೇ ವೇಳೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕುಂದಾಪುರ ಮಂಡಲದ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಬೀಜಾಡಿ, ಕುಂದಾಪುರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಕುಂದಾಪುರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯವಿನೋದ ದೇವಾಡಿಗ, ತೆಕ್ಕಟ್ಟೆ ಯುವ ಮೋರ್ಚಾದ ರಂಜಿತ್ ದೇವಾಡಿಗ ಸತತ 2ನೇ ದಿನ ವಾದ ಇಂದು ಆವರ ಜೊತೆ ಜೊತೆಯಲ್ಲಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.