ಡೈಲಿ ವಾರ್ತೆ: 05/ಆಗಸ್ಟ್/2024
ಮಾನವೀಯತೆ ಮೆರೆದ ಉಡುಪಿ ಖಾಸಗಿ ಬಸ್ ಚಾಲಕ,ನಿರ್ವಾಹಕರು – ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ
ಉಡುಪಿ: ಕರಾವಳಿಯ ಖಾಸಗಿ ಬಸ್ ನ ಚಾಲಕ, ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರಿನಲ್ಲಿ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸಿನಲ್ಲಿ ಅಸ್ವಸ್ಥಗೊಂಡ ಕಾಲೇಜ್ ವಿದ್ಯಾರ್ಥಿಯನ್ನು ಎಮರ್ಜೆನ್ಸಿ ವಾಹನವಾಗಿ ಬದಲಾಯಿಸಿ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಘಟನೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು.
ಇಂದು ಬೆಳಿಗ್ಗೆ ಉಡುಪಿಯಲ್ಲೂ ಇದೇ ಮಾದರಿಯ ಘಟನೆಯೊಂದು ನಡೆದಿದೆ.
ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಘಟನೆವು ಆ. 5 ರಂದು ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವಾಂತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಗೆ ಕೊಂಡೊಯ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಜೊತೆಗೆ ಬಾಲಕಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬಂದಿ ಸಹಕಾರ ನೀಡಿದ್ದಾರೆ.
ನವೀನ್ ಬಸ್ ಸಿಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.