



ಡೈಲಿ ವಾರ್ತೆ: 06/ಆಗಸ್ಟ್/2024


ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಮಾಜಿ ಅಧ್ಯಕ್ಷ ಜಯಕರ್ ಸುವರ್ಣ ಹೃದಯಾಘಾತದಿಂದ ನಿಧನ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರ ದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.