ಡೈಲಿ ವಾರ್ತೆ: 06/ಆಗಸ್ಟ್/2024
ಬೆಳಗಾವಿ: ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಅಪಾಯದಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ!
ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿ ರುವ ಸ್ನೇಹಂ ಟಿಕ್ಸೋ ಟೇಪ್ ತಯಾರಿಸುವ ಕಾರ್ಖಾನೆಗೆ ಮಂಗಳವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಸಾಧ್ಯತೆ ಇದೆ.
ತಾಲೂಕಿನ ನಾವಗೆ ಗ್ರಾಮದ ಬಳಿ ಇರುವ ಸ್ನೇಹಂ ಎಂಬ ಟಿಸ್ಕೋ ಟೇಪ್ ತಯಾರಿಸುವ ಈ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ. ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಇದ್ದಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ.
ಸುಮಾರು 60ಕ್ಕೂ ಹೆಚ್ಚು ಜನ ಒಳಗೆ ಇದ್ದರು ಎಂಬ ಮಾಹಿತಿ ಇದೆ. ಕಾರ್ಖಾನೆಯ ಲಿಪ್ಟ್ ಬಳಿ 8-10 ಕಾರ್ಮಿಕರು ಇದ್ದರು. ಕೂಡಲೇ ಐದು ಜನರನ್ನು ಹೊರಗೆ ತೆಗೆಯಲಾಗಿದೆ. ಇನ್ನೂ ಅನೇಕರು ಒಳಗೆ ಇದ್ದಿರುವ ಮಾಹಿತಿ ಇದೆ. ಆದರೆ ಏನು ಆಗಿದೆ ಎಂಬ ಮಾಹಿತಿ ಸಿಕ್ಕಿಲ್ಲ.
ಸ್ನೇಹಂ ಹೆಸರಿನ ಈ ಕಾರ್ಖಾನೆಯಲ್ಲಿ ಮೂರು ಶಿಫ್ಟ್‌ಗಳಲ್ಲಿ ತಲಾ 74 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಆವರಿಸಿಕೊಂಡಾಗ ಹೊರಗೆ ಬರಲು ಅನೇಕರು ಪರದಾಡುತ್ತಿದ್ದರು. ಬೆಂಕಿ ಕೆನ್ನಾಲಿಗೆ ಎಷ್ಟು ಭೀಕರವಾಗಿದೆ ಎಂದರೆ ಅಗ್ನಿಶಾಮಕ ವಾಹನಗಳು ಹತ್ತಿರ ಹೋಗಲೂ ಆಗುತ್ತಿಲ್ಲ. ಪೊಲೀಸರು, ಗ್ರಾಮಸ್ಥರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಆವರಿಸಿ ಇಡೀ ಕಾರ್ಖಾನೆಯನ್ನು ಸುಟ್ಟು ಭಸ್ಮ ಮಾಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ 200 ಹಾಸಿಗೆಗಳ ಸಿದ್ದತೆಗಳ ಮಾಡಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಹೇಳಿದ್ದಾರೆ. ಸ್ಥಳದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.