ಡೈಲಿ ವಾರ್ತೆ: 11/ಆಗಸ್ಟ್/2024

ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟ ನಡೆಯಿತು.

ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಅವರು ಮಾತನಾಡಿ ಪರಿಶ್ರಮದಿಂದ ಸಾಮರ್ಥ್ಯ ವೃದ್ಧಿಯಾಗುತ್ತದೆ ದೇಶಿಯ ಕ್ರೀಡೆಯಾದ ಕುಸ್ತಿ ಮಕ್ಕಳಲ್ಲಿ ದೈಹಿಕ ಕ್ಷಮತೆಯನ್ನು ತರುವಲ್ಲಿ ಸಹಾಯಕ ಎಂದು ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯ ಪಟ್ಟರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ ಪಂದ್ಯಾಟದ ಇಲಾಖೆ ನಿಯಮಗಳನ್ನು ಪ್ರಸ್ತಾವಿಸಿದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಹಿಸಿದ್ದರು.

ಸಭೆಯಲ್ಲಿ ಪ್ರಾಂಶುಪಾಲರಾದ ಸುಶೀಲಾ ಹೊಳ್ಳ ಉದ್ಯಮಿ ವತ್ಸಲಾ ದಯಾನಂದ್ ಶೆಟ್ಟಿ ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿಶನ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು ಮಂಜುನಾಥ್ ಹೊಳ್ಳ ವಂದಿಸಿ ಶಿಕ್ಷಕಿ ಅನುರಾಧ ಕಾರ್ಯಕ್ರಮ ನಿರ್ವಹಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ ವಿಜೇತರ ಪಟ್ಟಿಯನ್ನು ವಾಚಿಸಿದರು.