ಡೈಲಿ ವಾರ್ತೆ: 13/ಆಗಸ್ಟ್/2024

ಕಾರ್ಕಳ : ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮ

    ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 12 ಆಗಸ್ಟ್ 2024ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ' ನಶಾಮುಕ್ತ ಭಾರತ ಅಭಿಯಾನ ' 5 ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ,  ಜಾಗೃತಿ ಮೂಡಿಸಲಾಯಿತು. 
  ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ಶ್ರೀಯುತ ವಿನಾಯಕ ಜೋಗ್ ರವರು ಪ್ರತಿಜ್ಞಾವಿಧಿ ಬೋಧಿಸಿದರು.