ಡೈಲಿ ವಾರ್ತೆ: 15/ಆಗಸ್ಟ್/2024

ಕೋಟತಟ್ಟು ಗ್ರಾ. ಪಂ. ವತಿಯಿಂದ 78ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕೋಟ: 78ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆಡಳಿತದ ನಿರ್ದೇಶನದಂತೆ ಬೀಚ್ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದೊಂದಿಗೆ ಗ್ರಾಮ ಮಟ್ಟದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಪಡುಕೆರೆ ಕಡಲ ತೀರ ಸ್ವಚ್ಛತಾ ಅಭಿಯಾನವನ್ನು ದಿನಾಂಕ 15/0 8 /2024 ರಂದು ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ಸದಸ್ಯರಾದ ಶ್ರೀ ವಾಸು ಪೂಜಾರಿ, ಶ್ರೀ ಪ್ರಕಾಶ್ ಹಂದಟ್ಟು, ಶ್ರೀಮತಿ ಅಶ್ವಿನಿ, ಶ್ರೀಮತಿ ಸೀತಾ, ಶ್ರೀಮತಿ ಜ್ಯೋತಿ, ಶ್ರೀಮತಿ ವಿದ್ಯಾ, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್,ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ವಚ್ಚ ವಾಹಿನಿಯ ಸಿಬ್ಬಂದಿಗಳು, SLRM ಘಟಕದ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.