ಡೈಲಿ ವಾರ್ತೆ: 16/ಆಗಸ್ಟ್/2024

ಮೆಲ್ಕಾರ್ ಮಹಿಳಾ ಕಾಲೇಜು ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಮಾರ್ನಬೈಲ್ ನಾ ಮೆಲ್ಕಾರ್ ಮಹಿಳಾ ಪದವಿಪೂರ್ವ ಮತ್ತು ಪದವಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಫಯಾಜ್
ದೊಡ್ಡಮನೆ ಧ್ವಜಾರೋಹಣಗೈದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ದಲ್ಲಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷ ಸಂದರೂ ಇನ್ನೂ ಸರ್ವರಿಗೂ ಸಮಪಾಲು- ಸಮಬಾಳು ದಕ್ಕಿಲ್ಲ, ದೇಶದಲ್ಲಿ
ನಿರುದ್ಯೋಗ -ಬಡತನ ಮೂಲಭೂತ ಸೌಕರ್ಯಗಳ ಕೊರತೆ ಇನ್ನೂ ಅನೇಕ ಸಮಸ್ಯೆಗಳು ದೇಶವನ್ನು ಕಾಡುತ್ತಿದ್ದು ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯಲು
ಸರ್ವರೂ ಪ್ರಯತ್ನಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಉಪನ್ಯಾಸಕರಾದ ಎಂ.ಡಿ ಮಂಚಿ, ಅಬ್ದುಲ್ ಮಜೀದ್, ಅಶ್ವಿತಾ ಅವರು ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿನಿ ಸಂಶಾದ್, ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲೆ ಸುನೀತಾ ಪಿರೇರ, ಮಮತಾ ರಾವ್,
ನಿಶಾ ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಉಪನ್ಯಾಸಕಿ ಶಂಸುನ್ನೀಸ ಸ್ವಾಗತಿಸಿ, ಹರ್ಷ.ಕೆ ವಂದಿಸಿದರು ತಾಜುನ್ನೀಸ ಕಾರ್ಯಕ್ರಮ ನಿರೂಪಿಸಿದರು.