



ಡೈಲಿ ವಾರ್ತೆ: 16/ಆಗಸ್ಟ್/2024


ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ 10 ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಬಳಿ ಆ.16ರ ಶುಕ್ರವಾರ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿಬಹುದು ಎಂದು ಅಂದಾಜಿಸಲಾಗಿದೆ.
ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು.
ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.