ಡೈಲಿ ವಾರ್ತೆ: 18/ಆಗಸ್ಟ್/2024
ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು
ಕೊಚ್ಚಿ: ಮಾಲಿವುಡ್ ಚಿತ್ರರಂಗದ ಹಿರಿಯ ನಟ , ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೋಹನ್ ಲಾಲ್ ಅವರಿಗೆ ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಇತರೆ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿರುವ ಅವರಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂವಹನದಿಂದ ದೂರವಿರಲು ಸೂಚಿಸಲಾಗಿದ್ದು, ಸರಿಯಾದ ಔಷಧಿ ಹಾಗೂ ವಿಶ್ರಾಂತಿಯನ್ನು ಪಡೆಯಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.