ಡೈಲಿ ವಾರ್ತೆ: 18/ಆಗಸ್ಟ್/2024
ಶಿಕಾರಿಪುರ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿ.ಎಸ್ ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ – ಹಲವರು ಪೊಲೀಸರು ವಶಕ್ಕೆ
ಶಿವಮೊಗ್ಗ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಿದರು.
ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಖಾಸಗಿ ದೂರಿನ ಸಂಬಂಧ ಅರ್ಜಿಯನ್ನು ಪರಿಶೀಲಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿದ್ದರು. ಇದು ಸಂವಿಧಾನ ಬಾಹಿರವಾದಂತ ನಡೆಯಾಗಿದೆ. ಕಾನೂನು ವಿರೋಧಿ ನಿರ್ಧಾರವಾಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲೇ ಸಂಚಲ ಸೃಷ್ಠಿಸಿದ್ದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಅಲ್ಲದೇ ಮಾಜಿ ಸಿಎಂ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.