



ಡೈಲಿ ವಾರ್ತೆ: 18/ಆಗಸ್ಟ್/2024


ಮರವಂತೆ ಬಡಾಕೆರೆ ಸೊಸೈಟಿಗೆ ಪ್ರಶಸ್ತಿ
ಕುಂದಾಪುರ: 2023-24ನೇ ಸಾಲಿನ ಲೆಕ್ಕ ಪರಿಶೋಧನಾ ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ನಾವುಂದ) ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರಿನ ವಾರ್ಷಿಕ ಮಹಾಸಭೆಯಲ್ಲಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ . ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷ ಎಂ.ಚಂದ್ರಶೀಲ ಶೆಟ್ಟಿ ನಿರ್ದೇಶಕರಾದ ಎಂ.ವಿನಾಯಕ ರಾವ್, ರಾಮಕೃಷ್ಣ ಖಾರ್ವಿ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.