ಡೈಲಿ ವಾರ್ತೆ: 18/ಆಗಸ್ಟ್/2024
ಬಂಟ್ವಾಳದಲ್ಲಿ ಆ.19 ರಂದು ರೈ ನೇತ್ರತ್ವದಲ್ಲಿ ರಾಜ್ಯಪಾಲರ ನಡೆಯನ್ನು ಖಂಡಿಸಿ ಪಾದಯಾತ್ರೆ ಹಾಗೂ ಪ್ರತಿಭಟನೆ
ಬಂಟ್ವಾಳ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಮಾಜಿ ಸಚಿವ ರಮಾನಾಥ ರೈ ಅವರು ನೇತೃತ್ವದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ ಆ.19 ಸೋಮವಾರ ಬಿ.ಸಿ. ರೋಡಿನಲ್ಲಿ ನಡೆಯಲಿದೆ.
ಸೋಮವಾರ ಮದ್ಯಾಹ್ನ 3 ಗಂಟೆಗೆ ಬಿ.ಸಿ.ರೋಡ್ – ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡ್ ಮಿನಿ ವಿಧಾನಸೌಧ ತನಕ ಪಾದಯಾತ್ರೆ ನಡೆಯಲಿದ್ದು, ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.