ಡೈಲಿ ವಾರ್ತೆ: 19/ಆಗಸ್ಟ್/2024

ಬಾಗಲಕೋಟೆ: ಮಸೀದಿ ಮೌಲಾನಾ ಮೇಲೆ ಯುವಕರ ತಂಡದಿಂದ ಹಲ್ಲೆ – ಪೊಲೀಸ್‌ ಠಾಣೆ ಎದುರು ಪ್ರತಿಭಟನೆ, ಇಬ್ಬರ ಬಂಧನ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ತಂಡವೊಂದು ಹಲ್ಲೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ.
ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನವನಗರ ಠಾಣೆ ಎದುರು ಮುಸ್ಲಿಂ ಸಮುದಾಯದವರು ಜಮಾವಣೆಗೊಂಡು ಹಲ್ಲೆಕೋರರ ಮೇಲೆ ಕೂಡಲೇ ಕೇಸು ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಮುಸ್ಲಿಂ ಸಮುದಾಯದವರ ಮನವೊಲಿಸಿದ್ದಾರೆ.

ಗಣೇಶ್, ಕಾರ್ತಿಕ್, ಶಿವು, ಆದಿತ್ಯ ಸೇರಿ ಹಲವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ನಾಗರಾಜನಿಗಾಗಿ ಶೋಧ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.