ಡೈಲಿ ವಾರ್ತೆ: 20/ಆಗಸ್ಟ್/2024

ಆ. 22 ರಂದು ಮೊಳಹಳ್ಳಿ ಶಾಲೆಯಲ್ಲಿ ಹಾಲಾಡಿ ವೃತ್ತ ಮಟ್ಟದ ತ್ರೋ ಬಾಲ್ ಪಂದ್ಯಾಟ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ದಿನಾಂಕ 22/08/2024 ರಂದು ಗುರುವಾರ ಬೆಳಿಗ್ಗೆ ಕರ್ನಾಟಕ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ 2024 ಮತ್ತು 2025 ನೇ ಸಾಲಿನ ಹಾಲಾಡಿ ವೃತ್ತ ಮಟ್ಟದ ತ್ರೋ ಬಾಲ್ ಪಂದ್ಯಾಟ ಜರುಗಲಿದೆ. ಎಂದು ಶಾಲಾ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಶಾಲೆಯ ಕ್ರೀಡಾ ಕಾರ್ಯಕ್ರಮಕ್ಕೆ ಆಸಕ್ತ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಚಂದ ಕಾಣಿಸಿಕೊಡುವಂತೆ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಎಸ್ ಡಿ ಎಂ ಸಿ ಹಾಗೂ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಹಾಗೂ ಶಾಲಾ ಹಳೇ ವಿದ್ಯಾರ್ಥಿ ಸಂಘ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.