ಡೈಲಿ ವಾರ್ತೆ: 21/ಆಗಸ್ಟ್/2024

ಶಿವಮೊಗ್ಗ: ಆಯನೂರಿನ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ – ತಪ್ಪಿದ ದೊಡ್ಡ ದುರಂತ!

ಶಿವಮೊಗ್ಗ: ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಡೀ ಅಂಗಡಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬುಧವಾರ ಸಂಭವಿಸಿದೆ.

ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್‌ ಬೇಕರಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಅಂಗಡಿಯಲ್ಲಿದ್ದವರು ಅಂಗಡಿಯಿಂದ ಹೊರ ಓಡಿ ಬಂದಿದ್ದಾರೆ ಈ ವೇಳೆ ಬೇಕರಿಯೊಳಗೆ ಇದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಅಂಗಡಿಯಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.

ಬೆಂಕಿ ಅವಘಡ ಸಂಭವಿಸಿದ ಬೇಕರಿ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದು ದೊಡ್ಡ ಅನಾಹುತ ತಪ್ಪಿದಂತಾಗಿದೆ.