ಡೈಲಿ ವಾರ್ತೆ: 21/ಆಗಸ್ಟ್/2024
ಕೋಟ: ಮಣೂರು ಉದ್ಯಮಿ ಮನೆಗೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಯತ್ನಿಸಿದ ಆರೋಪಿಗಳಿಬ್ಬರ ಬಂಧನ, ಉಳಿದ ಆರೋಪಿತರ ಪತ್ತೆಗಾಗಿ ಶೋಧ
ಕೋಟ:ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಕರಿಕಲ್ ಕಟ್ಟೆ ಬಳಿಯ ಕವಿತಾ ಸುಧೀರ್ ಮನೆಯೊಂದಕ್ಕೆ ಐಟಿ ಅಧಿಕಾರಿಗಳ ಸೋಗಿನಲ್ಲಿ ನುಗ್ಗಿ ದರೋಡೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನಿವಾಸಿ ಚಿಕ್ಕಮಗಳೂರಿನ ಸಂತೋಷ್ ನಾಯಕ್(45) ಮತ್ತು ಕಾಪು ಪೊಲಿಪು ನಿವಾಸಿ ದೇವರಾಜ್ ಸುಂದರ್ ಮೆಂಡನ್(46) ಬಂಧಿತ ಆರೋಪಿಗಳನ್ನು ಕೋಟ ಠಾಣೆಗೆ ಕರೆತಂದಿದ್ದಾರೆ
ಘಟನೆ ವಿವರ: ಜುಲೈ 25ರಂದು ಮಣೂರಿನ ಕವಿತಾರವರ ಎಂಬವರ ಮನೆಗೆ ನಕಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಶಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಐಟಿ ಇಲಾಖೆಯವರಂತೆ ಆಗಮಿಸಿದ ಸುಮಾರು 6-8 ಜನ ಅಪರಿಚಿತರು ದಾಳಿಗೆ ಮನೆಗೆ ಅಕ್ರಮ ಪ್ರವೇಶಗೈದು ದಾಳಿಗೆ ಯತ್ನಿಸಿದರು. ಮನೆಯವರು ಬಾಗಿಲು ತೆರೆಯದ ಕಾರಣ ತಂಡ ವಾಪಸು ಹೋಗಿದೆ.
ಆರೋಪಿಗಳ ಪತ್ತೆಯ ಬಗ್ಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಆರುಣ್ ಕೆ ಐ.ಪಿ.ಎಸ್ ರವರ ಆದೇಶದಂತೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್‌ಟಿ ಸಿದ್ದಲಿಂಗಪ್ಪ ಮತ್ತು ಪರಮೇಶ್ವರ ಹೆಗಡೆ ಮತ್ತು ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಡಿಟಿ ಪ್ರಭು ರವರ ಮಾರ್ಗದರ್ಶನದಲ್ಲಿ ಶ್ರೀ ದಿವಾಕರ ಪಿ.ಎಮ್ ಸಿ.ಪಿ.ಐ ಬ್ರಹ್ಮಾವರರವರ ನೇತೃತ್ವದಲ್ಲಿ ಕೋಟ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ ಹಾಗೂ ಶ್ರೀಮತಿ ಸುಧಾಪ್ರಭು ಮತ್ತು ಹಿರಿಯಡ್ಕ ಠಾಣಾ ಪಿಎಸ್‌ಐ ಮಂಜುನಾಥ ರವರನ್ನು ಒಳಗೊಂಡ ಪ್ರತ್ಯೇಕ 03 ತಂಡಗಳನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ವೈಜ್ಞಾನಿಕ ವಿಶ್ಲೇಷಣೆ ನಡೆಸಿ, ಆರೋಪಿತರ ಪತ್ತೆಗಾಗಿ ಬೆಂಗಳೂರು ಮತ್ತು ಮಹಾರಾಷ್ಟ್ರ ಕ್ಕೆ ಮತ್ತು ಸ್ಥಳೀಯವಾಗಿ ಶೋದನ ಕಾರ್ಯ ಕೈಗೊಂಡು 02 ಜನ ಆರೋಪಿತರ ಪತ್ತೆ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂದನಕ್ಕೆ ಒಳಗಾಗಿರುತ್ತಾರೆ. ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಿ, ಉಳಿದ ಆರೋಪಿತರ ಪತ್ತೆಗಾಗಿ ಹುಡುಕಾಟ ನಡೆದಿರುತ್ತದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತರು ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ಮಾಡುವ ಸಂಚು ರೂಪಿಸಿ ಮಹಾರಾಷ್ಟ್ರದಿಂದ ಬಂದಿರುತ್ತಾರೆ. ಇದಕ್ಕೆ ಜಿಲ್ಲೆಯ ಸ್ಥಳಿಯ ಆರೋಪಿತರು ಕೂಡ ಕೃತ್ಯದಲ್ಲಿ ಬಾಗಿಯಾಗಿರುತ್ತಾರೆ ಎಂದು ತಿಳಿದು ಬಂದಿದೆ.