ಡೈಲಿ ವಾರ್ತೆ: 22/ಆಗಸ್ಟ್/2024

ಬಂಟ್ವಾಳ : ಬಿಜೆಪಿ ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆ

ಬಂಟ್ವಾಳ : ಬಿಜೆಪಿ ಪಕ್ಷವನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಸಲು ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಶಾಂತಿ ಮತ್ತು ನೆಮ್ಮದಿಯ ಜೀವನವನ್ನು ನಡೆಸುವ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಲ್. ಬೋಜೇಗೌಡ ಅವರನ್ನು ಅಭಿನಂದಿಸಲಾಯಿತು.

ಅಭಿನಂದನೆಯನ್ನು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ಬಲಿಷ್ಠವಾಗಿದೆ, ಹಲವು ಷಡ್ಯಂತ್ರಗಳ ನಡುವೆಯೂ 2024 ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತದ ಆಶೀರ್ವಾದ ಮಾಡಿದ್ದೀರಿ, ಅದಕ್ಕೆ ವಿಶೇಷವಾದ ಧನ್ಯವಾದ ನೀಡುತ್ತೇನೆ, ಬಿಜೆಪಿ ವಿಚಾರಧಾರೆಯ ಅಡಿಯಲ್ಲಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ನಮ್ಮ ಭಾಗ್ಯ ಎಂದವರು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಬಿ.ಎಲ್.ಬೋಜೇಗೌಡ ಮಾತನಾಡಿ, ಎಲ್ಲರ ಧ್ವನಿಯಾಗಿ ಪರಿಷತ್ ಒಳಗೆ ಮತ್ತು ಹೊರಗೆ ಸದಾ ಇರುತ್ತೇನೆ, ಶಿಕ್ಷಣ ಕ್ಷೇತ್ರಕ್ಕೆ ನ್ಯಾಯವನ್ನು ಕೊಡುವ ಕೆಲಸ ಮಾಡುತ್ತೇನೆ
ಎಂದು ಭರವಸೆ ನೀಡಿದ ಅವರು ಅವಿಭಜಿತ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಪಕ್ಷ ನಿಷ್ಠೆಯುಳ್ಳವರು ಹಾಗಾಗಿ ಸದಾ ಭದ್ರಕೋಟೆಯಾಗಿಯೇ ಉಳಿದಿದೆ ಎಂದರು.

ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಬಿಜೆಪಿ ಮಂಡಲದ ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾಡ್ತ, ಸಂಘಟನಾ ಪರ್ವದ ಸಂಚಾಲಕ ದೇವದಾಸ ಶೆಟ್ಟಿ, ಬೂತ್ ಚಲೋ ಕಾರ್ಯಕ್ರಮದ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ , ಸಂಘಟನಾ ಪರ್ವದ ಪ್ರಭಾರಿ ಜಗದೀಶ್ ಶೇಣವ, ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯ ಅಂಗವಾಗಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಬಿಜೆಪಿ ಪ್ರಮುಖರಾದ ಡೊಂಬಯ್ಯ ಅರಳ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಬಗ್ಗೆ ಪ್ರಧಾನ ಭಾಷಣ ಮಾಡಿದರು.

ವಿಕಾಶ್ ಪುತ್ತೂರು ಅಭಿನಂದನಾ ಭಾಷಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.