ಡೈಲಿ ವಾರ್ತೆ: 23/ಆಗಸ್ಟ್/2024
ಬಂಟ್ವಾಳ : ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಕಛೇರಿ ಉದ್ಘಾಟನೆ
ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಕಚೇರಿ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಕಛೇರಿಯ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.
ಕಚೇರಿಯನ್ನು ಉದ್ಘಾಟಿಸಿದ ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಮಾತನಾಡಿ,
ತಾಲೂಕಿನಲ್ಲಿ ಬಾಕಿಯಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ಸಿಗುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು .
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಗೊಳಿಸಲು ಸಮಿತಿಯನ್ನು ಸರಕಾರ ರಚಿಸಿದ್ದು, ಅದಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ನೋಡಿಕೊಳ್ಳುವುದು ಸಮಿತಿಯ ಜವಾಬ್ದಾರಿಯಾಗಿದೆ. ಜಯಂತಿ ವಿ ಪೂಜಾರಿ ಅವರ ನೇತೃತ್ವದಲ್ಲಿ ಉತ್ತಮವಾಗಿ ಈ ಕಾರ್ಯ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡಾ ಅದ್ಯಕ್ಷ ಬೇಬಿ ಕುಂದರ್, ಸದಸ್ಯ ರಝಾಕ್ ಗೂಡಿನ ಬಳಿ, ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರುಗಳಾದ ಜನಾರ್ಧನ ಚೆಂಡ್ತಿಮಾರು, ಲೋಲಾಕ್ಷ, ಜೆಸಿಂತಾ, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕುಕ್ಕಾಜೆ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ.ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯ ಕೆ . ಶ್ರೀಧರ್ ರೈ, ಸಜಿಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಉಪಾಧ್ಯಕ್ಷೆ ಫೌಝಿಯಾ, ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿ, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.
ಕಾಂಗ್ರೆಸ್ ಪ್ರಮುಖರಾದ ಪಿಯೂಸ್ ಎಲ್.ರೋಡ್ರಿಗಸ್, ಅಶ್ಬನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಪದ್ಮರಾಜ್ ಆರ್ ಪೂಜಾರಿ, ಸುದೀಪ್ ಕುಮಾರ್ ಶೆಟ್ಟಿ, ಬಿ.ಎಂ. ಅಬ್ಬಾಸ್ ಆಲಿ, ಮಾಯಿಲಪ್ಪ ಸಾಲ್ಯಾನ್, ಕೆ.ಪದ್ಮನಾಭ ರೈ,ಶಾಲೆಟ್ ಪಿಂಟೋ, ಮಲ್ಲಿಕಾ ಶೆಟ್ಟಿ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಸುದರ್ಶನ ಜೈನ್, ಸಂಜೀವ ಪೂಜಾರಿ, ಸುರೇಶ್ ಕುಲಾಲ್ ನಾವೂರ, ದೇವಿಪ್ರಸಾದ್ ಪೂಂಜಾ, ನವಾಝ್ ಬಡಕಬೈಲು, ಸುಭಾಷ್ ಶೆಟ್ಟಿ ಕೊಳ್ನಾಡು, ಅರ್ಶದ್ ಸರವು, ಸುರೇಶ್ ಜೋರ, ಮುಹಮ್ಮದ್ ನಂದಾವರ, ಮಧುಸೂದನ್, ಸಿದ್ದೀಕ್ ಸರವು, ಅಲ್ತಾಫ್ ಕುಳಾಯಿ, ವೆಂಕಪ್ಪ ಪೂಜಾರಿ, ಸಫ್ವಾನ್ ಸರವು ಹಾಗೂ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಮಹಮ್ಮದ್ ಸಿರಾಜ್ ಎಂ.ಯು, ಐಡಾ ಸುರೇಶ್, ಎನ್.ಅಬ್ದುಲ್ ಕರೀಂ ಬೊಳ್ಳಾಯಿ, ಸುದೀಂದ್ರ ಶೆಟ್ಟಿ, ಸತೀಶ್, ಮುರಳೀಧರ್ ವೈ, ವಿನಯಕುಮಾರ್, ಕಾಂಚಲಾಕ್ಷಿ, ಹರ್ಷನ್ ಬಿ.ಪವಿತ್ರ, ಚಂದ್ರಶೇಖರ, ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು .
ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು.