ಡೈಲಿ ವಾರ್ತೆ: 27/ಆಗಸ್ಟ್/2024

ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು!

ಚಿಕ್ಕಮಗಳೂರು: ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.

ಇಲ್ಲಿನ ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ಬೇಲಿ ದಾಟುವ ವೇಳೆ ಇಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.