ಡೈಲಿ ವಾರ್ತೆ: 28/ಆಗಸ್ಟ್/2024

ಶಿವಮೊಗ್ಗ: ಸೇತುವೆಯಿಂದ ಕೆಳಗೆ ಬಿದ್ದ ಕಾರು, ಇಬ್ಬರು ಮಕ್ಕಳು ಸೇರಿ ಆರು ಮಂದಿ ಗಾಯ!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ.

ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.