ಡೈಲಿ ವಾರ್ತೆ: 29/ಆಗಸ್ಟ್/2024
ಅಕ್ರಮ ಅಸ್ತಿ ಕೇಸ್: ಸಿಬಿಐ, ಯತ್ನಾಳ್ ಅರ್ಜಿ ವಜಾ, ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಸೂಕ್ತ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ . ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದ ಬಗ್ಗೆ ನಿರ್ಣಯಿಸದೇ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಸೂಕ್ತ ಎಂದಿದೆ. ಹೀಗಾಗಿ ಅಂತಿಮವಾಗಿ ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಮಾನಿಸಬೇಕಿದೆ. ಇನ್ನು ಸಿಬಿಐ ಮತ್ತು ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್‌ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಡಿಕೆ ಶಿವಕುಮಾರ್ ನಿರಾಳರಾಗಿರಬಹುದು.