ಡೈಲಿ ವಾರ್ತೆ: 30/ಆಗಸ್ಟ್/2024
ಕರಾವಳಿ ಭಾಗಗಳಲ್ಲಿ ಬಾರೀ ಮಳೆ ನಿರೀಕ್ಷೆ: ಹವಮಾನ ಇಲಾಖೆ – ಉಡುಪಿಗೆ ರೆಡ್, ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!
ಕರಾವಳಿಯಲ್ಲಿ ಸೆಪ್ಟೆಂಬರ್ 5 ರವರೆಗೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ.
ಹವಾಮಾನ ಇಲಾಖೆಯು ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳಿಗೆ ಅನ್ವಯವಾಗುವಂತೆ ಅಲರ್ಟ್‍ಗಳನ್ನು ಘೋಷಿಸಲಾಗಿದೆ.
ಎರಡು ದಿನಗಳ ಕಾಲ ಕರಾವಳಿ ಜಿಲ್ಲೆ ಉಡುಪಿಗೆ ಕ್ರಮವಾಗಿ ಆರೆಂಜ್ ಮತ್ತು ರೆಡ್ ಅಲರ್ಟ್ ನೀಡಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಎರೆಡೂ ದಿನ ಆರೆಂಜ್ ಅಲರ್ಟ್ ಕೊಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.