ಡೈಲಿ ವಾರ್ತೆ: 02/Sep/2024
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ – ಸೆ. 9 ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಸೆಪ್ಟೆಂಬರ್ 9ರಂದು ಮಧ್ಯಾಹ್ನ 2.30ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆ ಪೂರ್ಣಗೊಳಲಿದೆ. ಈ ಮೂಲಕ ಈ ಕೇಸ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.