ಡೈಲಿ ವಾರ್ತೆ: 03/Sep/2024

ಯಶವಂತಪುರ: ಬೈಕ್​ಗೆ ಡಿಕ್ಕಿಹೊಡೆದು ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ

ಬೆಂಗಳೂರು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಫ್ಲೈಓವರ್​ನಿಂದ ಕೆಳಗೆ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಯಶವಂತಪುರ ಸರ್ಕಲ್​ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ​​​ಮೇಲಿಂದ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪೊಲೀಸರು, ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.