ಡೈಲಿ ವಾರ್ತೆ: 11/Sep/2024
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ
ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಅವರು ಸೆ. 11 ರಂದು ಬುಧವಾರ ಬೆಳಿಗ್ಗೆ ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅವರ ನಿವಾಸದ ಬಳಿ ಪೊಲೀಸರ ಜೊತೆ ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಕೂಡ ಭೇಟಿ ನೀಡಿದ್ದಾರೆ.
ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.