ಡೈಲಿ ವಾರ್ತೆ: 11/Sep/2024

ಮಣಿಪಾಲ: ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿಯ ಬಂಧನ

ಮಣಿಪಾಲ: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ನವೀನ್ ನಾಯ್ಕ್ (22) ಎನ್ನಲಾಗಿದೆ.

ಆರೋಪಿ ನವೀನ್ ಸೆಪ್ಟೆಂಬರ್ 09 ರಂದು ಬೆಳಗಿನ ಜಾವಾ ಸುಮಾರು 2.15 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತನಗರದಲ್ಲಿರುವ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ಕಿಟಕಿಯಿಂದ ಒಳಗೆ ಕೈಹಾಕಿ ಅಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದು ಖಚಿತ ಮಾಹಿತಿಯ ಮೇರೆಗೆ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.