ಡೈಲಿ ವಾರ್ತೆ: 15/Sep/2024

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದ ಮಾನವ ಸರಪಳಿಯ ಒಂದು ನೋಟ

ಕೋಟ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಭಿನ್ನ ವಾಗಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಕೋಟ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಮೆಸ್ಕಾಂ ಸಿಬ್ಬಂದಿಗಳು ಹಾಗೂ ಲೈನ್ ಮ್ಯಾನ್ ಗಳು, ಕೋಟ ಸಂಘ ಸಂಸ್ಥೆಯ ಸದಸ್ಯರುಗಳು, ಕೋಟ ಮುಸ್ಲಿಂ ಬಾಂಧವರು ಹಾಗೂ ಊರ ಗಣ್ಯರು ಪಾಲ್ಗೊಂಡಿದ್ದರು.