ಡೈಲಿ ವಾರ್ತೆ: 19/Sep/2024

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ – ಚಾಲಕನಿಗೆ ಗಂಭೀರ ಗಾಯ

ಕೋಟ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಶಾಲಾ ವಾಹನವೊ ಕೋಟದಿಂದ ಹೆಮ್ಮಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ಅಪಘಾತವನ್ನು ತಪ್ಪಿಸಲು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಈ ಅಪಘಾತದಿಂದಾಗಿ ಚಾಲಕನ ತಲೆ, ಕಣ್ಣು ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅಲ್ಲದೆ ವಾಹನದಲ್ಲಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರಿಗೂ ಕೂಡಾ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯರು ತತ್‌ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.