ಡೈಲಿ ವಾರ್ತೆ: 20/Sep/2024

ಕೋಟೇಶ್ವರದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿಯ ಪಕ್ಷದ ಕಾರ್ಯಕರ್ತರೊಂದಿಗೆ ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಇಂದು ಸನ್ಮಾನ್ಯ ದೇಶದ ನರೇಂದ್ರ ಮೋದಿಜಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೋಟೇಶ್ವರದ ಮುಖ್ಯ ರಸ್ತೆಯಲ್ಲಿರುವ ಅಂಗಡಿಗಳಿಗೆ, ಹಾಗೂ ಸಾರ್ವಜನಿಕರ ಬಳಿ ತೆರಳಿ ಬಿಜೆಪಿ ಪಕ್ಷದ ಸದಸ್ಯತ್ವ ನೊಂದಾವಣಿಯನ್ನು ಮಾಡಿದರು.
ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ಬಹಳ ಹುಮ್ಮಸ್ಸಿನಿಂದ ನೊಂದಾವಣಿಯ ಪ್ರಕ್ರಿಯೆಗೆ ಸಹಕರಿಸಿದರು.