ಡೈಲಿ ವಾರ್ತೆ: 01/OCT/2024

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಸೋಮವಾರ ತಡರಾತ್ರಿ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ರಜನಿಕಾಂತ್ ಅವರ ಆರೋಗ್ಯದ ಕುರಿತು ಆಸ್ಪತ್ರೆ ಅಥವಾ ಕುಟುಂಬ ಸದಸ್ಯರಿಂದ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ. ಇಂದು ಚಿಕಿತ್ಸೆಯ ಬಳಿಕ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

ನೆಚ್ಚಿನ ನಟ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.