


ಡೈಲಿ ವಾರ್ತೆ: 02/OCT/2024



ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ವತಿಯಿಂದ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ
ಕೋಟ: ಮಹಾತ್ಮ ಗಾಂಧೀಜಿ ಅವರ ಜನ್ಮದಿನದ (ಅ. 2) ಅಂಗವಾಗಿ ಉಡುಪಿ ಜಿಲ್ಲೆಯ ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ಇದರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಗಾಂಧೀಜಿ ಸ್ಮರಣೆಗೆ ‘ಸ್ವಚ್ಛತೆಯೇ ಸೇವೆ’ ಕಾರ್ಯಕ್ರಮ ನಡೆಯಿತು.
ಪಡುಕರೆಯ ಸುತ್ತಮುತ್ತಲಿನ ರಸ್ತೆಯ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಿ ಪಂಚಾಯತ್ ಕಸದ ವಾಹನಕ್ಕೆ ತುಂಬಿಸಿ ಕಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ರಾಮದಾಸ್ ನಾಯಕ್ ಹರ್ಷಿತಾ ಉಪಸ್ಥಿತಿತರಿದ್ದರು