ಡೈಲಿ ವಾರ್ತೆ: 04/OCT/2024
ಅ. 7 ಮತ್ತು 9 ರಂದು ಗೃಹಲಕ್ಷ್ಮಿ 2 ಕಂತಿನ ಹಣ ಜಮೆ: ಹೆಬ್ಬಾಳ್ಕರ್
ಬೆಳಗಾವಿ: ನವರಾತ್ರಿ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್‌ನಲ್ಲಿ ಜಮೆಯಾಗಲಿದೆ.
ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಅ.7 ಮತ್ತು 9 ರಂದು ಎರಡೂ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು.
ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಿದರು.