ಡೈಲಿ ವಾರ್ತೆ: 06/OCT/2024
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ : ಪ್ರಕರಣ ದಾಖಲು
ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆ.