ಡೈಲಿ ವಾರ್ತೆ: 06/OCT/2024
ಮುರುಡೇಶ್ವರ ಬೀಚ್ ನಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಮುದ್ರ ಪಾಲು, ಓರ್ವನ ರಕ್ಷಣೆ
ಮುರುಡೇಶ್ವರ: ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಬೆಂಗಳೂರಿನ ವಿಧ್ಯಾಸೌದ ಪ್ರಥಮ ದರ್ಜೆ ಕಾಲೇಜಿನ ಗೌತಮ್ (17) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಒಟ್ಟೂ 220 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭ ಗೌತಮ್ ಹಾಗೂ ಧನುಶ್ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮ
ಧನುಶ್ ಎಂಬಾತನನ್ನ ಸ್ಥಳೀಯ ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಆದರೆ ಗೌತಮ್ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುತ್ತಾನೆ.
ಅಸ್ವಸ್ಥವಾದ ಧನುಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮುರುಡೇಶ್ವರ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.