ಡೈಲಿ ವಾರ್ತೆ: 08/OCT/2024

ಹರಿಯಾಣದಲ್ಲಿ ಬಿಜೆಪಿ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ NC ಮುನ್ನಡೆ

ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರುವ ಆಸೆಯಲ್ಲಿ ಕಾಂಗ್ರೆಸ್ ಪಾಳಯ ಇದೆ. ಕಮಲ ಪಾಳಯವು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದು, ಸರ್ಕಾರ ರಚನೆಯ ಭರವಸೆಯಲ್ಲಿವೆ. ರಾಜ್ಯದಲ್ಲಿ ದಶಕದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ತನ್ನ ನೇತೃತ್ವದ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ.

ಹೈಲೈಟ್ಸ್

  • ಬೆಳಿಗ್ಗೆ 10.30ರ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಎಸ್‌ಸಿ ಮೈತ್ರಿಕೂಟ 48 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿತ್ತು. ಬಿಜೆಪಿ 26, ಪಿಡಿಪಿ 3, ಜೆಕೆಪಿಸಿ 1, ಇತರರು 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಹರಿಯಾಣದಲ್ಲಿ ಬಿಜೆಪಿ 49, ಕಾಂಗ್ರೆಸ್ 34, ಎನ್‌ಎಲ್‌ಡಿ 2, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿದ್ದರು.
  • ಹರಿಯಾಣದ ಹಿಸಾರ್‌ನಲ್ಲಿ ಸಾವಿತ್ರಿ ಜಿಂದಾಲ್‌ ಮುನ್ನಡೆ
  • ಜಮ್ಮು ಮತ್ತು ಕಾಶ್ಮೀರದ ಬಡಗಾಮ್ ಮತ್ತು ಗಂದೇರ್‌ವಾಲ್‌ನಲ್ಲಿ ಓಮರ್ ಅಬ್ಉಲ್ಲಾ ಮುನ್ನಡೆ
  • ಬೆಳಿಗ್ಗೆ 9.30ರ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎಸ್‌ಸಿ ಮೈತ್ರಿಕೂಟ 50 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿತ್ತು. ಬಿಜೆಪಿ 28, ಪಿಡಿಪಿ 4, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು.
  • ಹರಿಯಾಣದ ಜುಲಾನ ಕ್ಷೇತ್ರದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ಯೋಗೇಶ್ ಭೈರಾಗಿ ಹಿನ್ನಡೆ ಅನುಭವಿಸಿದ್ದಾರೆ.
  • ಶ್ರೀಗುಫ್ವಾರಾ
    -ಬಿಜ್‌ಬೆಹರಾದಲ್ಲಿ ಮೆಹಬೂಬಾ ಅವರ ಪುತ್ರಿ ಇಲ್ತಿಜಾ ಮುಪ್ತಿ ಹಿನ್ನಡೆ ಅನುಭವಿಸಿದ್ದಾರೆ

*ಹರಿಯಾಣದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

  • ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಸರಳ ಬಹುಮತಕ್ಕೆ 46 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ.
  • ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಆದರೆ, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.
  • 92 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಸರಳ ಬಹುಮತಕ್ಕೆ ಯಾವುದೇ ಪಕ್ಷ 47 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ.