ಡೈಲಿ ವಾರ್ತೆ: 11/OCT/2024

ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ: ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ-2 ಬೋಗಿಗಳಿಗೆ ಬೆಂಕಿ

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಿಂದ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ.

ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ಇಂದು (ಶುಕ್ರವಾರ) ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ಶೀಘ್ರದಲ್ಲೇ ರಕ್ಷಣಾ ಪಡೆ ಆಗಮಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲು ಸಂಖ್ಯೆ 12578 ಮೈಸೂರು-ದರ್ಭಾಂಗ ಬಾಗಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಲೂಪ್ ಲೈನ್‌ನಲ್ಲಿ ಪ್ರವೇಶಿಸಿ ನಿಂತಿದ್ದ ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.