ಡೈಲಿ ವಾರ್ತೆ: 14/OCT/2024
ದಕ್ಷಿಣ ಕನ್ನಡ: ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ – ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು!
ಅರಂತೋಡು: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು ಕಾಣಿಸಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಅ. 14 ರಂದು ಸೋಮವಾರ ಸುಳ್ಯ ತೊಡಿಕಾನನಲ್ಲಿ ನಡೆದಿದೆ.
ಮೃತಪಟ್ಟ ಚಾಲಕ ಗುರು ಪ್ರಸಾದ್ ಕುಂಚಡ್ಕ(30) ಎಂದು ಗುರುತಿಸಲಾಗಿದೆ.
ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.