ಡೈಲಿ ವಾರ್ತೆ: 16/OCT/2024

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೂವರ ಸಾವು

ಮುಂಬೈ: ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿರುವ ಕಟ್ಟಡವೊಂದರಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.