ಡೈಲಿ ವಾರ್ತೆ: 17/OCT/2024
ದ.ಕ. ಜಿಲ್ಲೆಯಲ್ಲಿ ಹಿಂದುತ್ವದ ಯುವಕರಿಂದ ಒಂದು ಸಮಾಜಕ್ಕೆ ಸೇರಿದ 1 ಲಕ್ಷ ಹೆಣ್ಣುಮಕ್ಕಳು ವೇಶ್ಯೆಯಾಗಿದ್ದಾರೆ: ಅರಣ್ಯಾಧಿಕಾರಿ ವಿವಾದಾತ್ಮಕ ಹೇಳಿಕೆ, ಆಡಿಯೋ ವೈರಲ್
ಮಂಗಳೂರು: ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದ.ಕ. ಜಿಲ್ಲೆಯಲ್ಲಿ ಹಿಂದುತ್ವದ ಯುವಕರಿಂದ ಒಂದು ಸಮಾಜಕ್ಕೆ ಸೇರಿದ 1 ಲಕ್ಷ ಹೆಣ್ಣುಮಕ್ಕಳು ವೇಶ್ಯೆಯಾಗಿದ್ದಾರೆ: ಅರಣ್ಯಾಧಿಕಾರಿ ವಿವಾದಾತ್ಮಕ ಹೇಳಿಕೆ, ಆಡಿಯೋ ವೈರಲ್
ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಬೆಳ್ಳಾರೆ ಪೊಲೀಸ್ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.
ಸಂಘಪರಿವಾರದ ಕಾರ್ಯಕರ್ತ ಸುರೇಶ್ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬುವವರು ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್ ಹಾಕಿದ್ದರು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ವಿರೋಧಿಸಿ ಸಂಘಪರಿವಾರದ ಕಾರ್ಯಕರ್ತ ಸುರೇಶ್ ಕಾಸರಗೋಡು ಎಂಬುವವರು ಸಂಜೀವ್ ಪೂಜಾರಿಗೆ ಕರೆ ಮಾಡಿದ್ದರು ಎಂದು ತಿಳಿದು ಬಂದಿದೆ.
ದೂರವಾಣಿಯಲ್ಲಿ ಮಾತನಾಡುವಾಗ “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ.
ಹಿಂದುತ್ವದ ಹುಡುಗರು ಭಜನೆ ಮಾಡಿ ರಾತ್ರಿ ಮರದಡಿ ಹುಡುಗಿಯರನ್ನು ಮಲಗಿಸುತ್ತಾರೆ ಎಂದು ಹೇಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಲ್ಲದೆ ತುಳುವಿನಲ್ಲಿ ಮಾತನಾಡಿರುವ ಆಡಿಯೋ ಈಗ ಭಾರೀ ವೈರಲ್ ಆಗುತ್ತಿದೆ.