ಡೈಲಿ ವಾರ್ತೆ: 17/OCT/2024

ವಿನಿತಾ ಸುಜಯೀಂದ್ರ ಹಂದೆಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕೋಟ: ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA) ಇವರಿಂದ ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿ
ವಿನೀತಾ ಸುಜಯೀಂದ್ರ ಹಂದೆಯವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 21 ರಂದು ಬೆಂಗಳೂರಿನ ಜ್ಯುಬಿಲಿ ಇಂಟರ್ನ್ಯಾಷನಲ್ ವಿದ್ಯಾ ಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನಮಾಡಲಾಗುವುದು.