ಡೈಲಿ ವಾರ್ತೆ: 19/OCT/2024

ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ದಿನಾಂಕ 19-10-2024ರಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್ ಅವರು ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯ ಬಗ್ಗೆ ಮಾರ್ಗದರ್ಶನ ಹಾಗೂ ಜಾಗೃತಿ ಮೂಡಿಸಿದರು. ಅಲ್ಲದೆ 21-10-2024ರಂದು ನಡೆಯುವ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯ ಮತದಾನ ಮಾಡಲು ತಿಳಿಸಿದರು.

ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ಶ್ರೀಮತಿ ಜ್ಯೋತಿ, ಶ್ರೀಮತಿ ಅಶ್ವಿನಿ, ಶ್ರೀಮತಿ ಸೀತಾ, ಪ್ರಮೋದ್ ಹಂದೆ, ರವೀಂದ್ರ ತಿಂಗಳಾಯ, ರಾಬರ್ಟ್ ರೊಡ್ರಿಗಸ್, ಶ್ರೀಮತಿ ವಿದ್ಯಾ , ಶ್ರೀಮತಿ ಪೂಜಾ, ಶ್ರೀಮತಿ ಸಾಹಿರಾ ಬಾನು, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.