ಡೈಲಿ ವಾರ್ತೆ: 21/OCT/2024

ಭಾರೀ ಮಳೆ ಹಿನ್ನಲೆ ಬೆಂಗಳೂರು ಶಾಲೆಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು (ಸೋಮವಾರ) ರಜೆ ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸೋಮವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಮೌಖಿಕವಾಗಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ.