


ಡೈಲಿ ವಾರ್ತೆ: 22/OCT/2024



ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು
ಚಿಕ್ಕೋಡಿ: ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.
ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ ಆಫ್ರೀನ್ ಜಮಾದಾರ್ (17) ಮೃತ ದುರ್ದೈವಿ.
ಮಂಗಳವಾರ ಪರೀಕ್ಷೆ ಇದ್ದ ಹಿನ್ನೆಲೆ ಸೋಮವಾರ ಮಧ್ಯರಾತ್ರಿ ವಸತಿ ಶಾಲೆಯ ಮೊದಲ ಮಹಡಿಯಲ್ಲಿ ಓದುತ್ತಾ ಕುಳಿತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.