ಡೈಲಿ ವಾರ್ತೆ: 25/OCT/2024

ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರಗೊಂಡ ಘಟನೆ ಅ. 24 ರಂದು ಗುರುವಾರ ತಡರಾತ್ರಿ ಮಲವಗೊಪ್ಪ ಎಂಬಲ್ಲಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿದ್ದ ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರೆಲ್ಲ ವಿದ್ಯಾನಗರದವರು ಎನ್ನಲಾಗಿದೆ.

ಶಿವಮೊಗ್ಗದಿಂದ ತೆರಳುತ್ತಿದ್ದ ಲಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್‌‌ ಲಾರಿಗೆ ಡಿಕ್ಕಿ ಹೊಡೆಯುವ ಮುನ್ನ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಆ ನಂತರ ಲಾರಿಗೆ ಗುದ್ದಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.